ರೊಮೇನಿಯಾ: ವಿದ್ಯಾರ್ಥಿಗಳ ಪೋಷಕರ ಜೊತೆ ಮಾತನಾಡಿ ಧೈರ್ಯ ತುಂಬಿದ ಸಚಿವ ಸಿಂಧಿಯಾ - ಉಕ್ರೇನ್ ಸಂಘರ್ಷ
ರೊಮೇನಿಯಾ: ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ರಕ್ಷಣೆಗೋಸ್ಕರ ಭಾರತ ಸರ್ಕಾರ ಕೇಂದ್ರದ ನಾಲ್ವರು ಸಚಿವರನ್ನು ವಿವಿಧ ದೇಶಗಳಿಗೆ ರವಾನಿಸಿದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸದ್ಯ ರೊಮೇನಿಯಾದಲ್ಲಿದ್ದಾರೆ. ಅಲ್ಲಿನ ಹೆನ್ರಿ ಕೋಂಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದು ಕಂಡುಬಂತು.
Last Updated : Feb 3, 2023, 8:18 PM IST