ಶ್ರೀ ಶಿವಶಾಂತವೀರ ಶಿವಯೋಗಿಗಳ ಪುಣ್ಯಸ್ಮರಣೆಗಾಗಿ ಶ್ರೀ ಗವಿಸಿದ್ದೇಶ್ವರ ಶ್ರೀಗಳಿಂದ ಪಾದಯಾತ್ರೆ - ಕೊಪ್ಪಳ ಗವಿಮಠ ಶ್ರೀಗವಿಸಿದ್ದೇಶ್ವರ ಸ್ವಾಮೀಜಿ ಪಾದಯಾತ್ರೆ
ಕೊಪ್ಪಳ : ಪ್ರಸಿದ್ಧ ಗವಿಮಠದ ಲಿಂಗೈಕ್ಯ ಪೂಜ್ಯ ಶ್ರೀ ಶಿವಶಾಂತವೀರ ಶಿವಯೋಗಿಗಳ ಪುಣ್ಯಸ್ಮರಣೆ ಹಿನ್ನೆಲೆ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳು ಪಾದಯಾತ್ರೆ ನಡೆಸಿದರು. ನಗರದ ಹೊರವಲಯದಲ್ಲಿರುವ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಿ ಗವಿಮಠದವರೆಗೂ ನಡೆಯಿತು. ವಿವಿಧ ಮಠಗಳ ಸ್ವಾಮೀಜಿಗಳು ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಭಕ್ತರು ಹಾಗೂ ವಿಶೇಷವೆಂದರೆ ಸುಮಾರು 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿದ್ದರು. 5 ಕಿ.ಮೀನಷ್ಟು ನಡೆದ ಪಾದಯಾತ್ರೆಯಲ್ಲಿ ದಾರಿಯುದ್ದಕ್ಕೂ ಜನರು ಮಜ್ಜಿಗೆ, ಜ್ಯೂಸ್ ಹಾಗೂ ಐಸ್ ಕ್ರೀಂ ವಿತರಣೆ ಮಾಡಿದರು.
Last Updated : Feb 3, 2023, 8:21 PM IST