ರಾಷ್ಟ್ರವ್ಯಾಪಿ ಮುಷ್ಕರ ಬೆಂಬಲಿಸಿ ಕಲಬುರಗಿಯಲ್ಲಿ ಕಾರ್ಮಿಕರಿಂದ ಬೃಹತ್ ಮೆರವಣಿಗೆ - nationwide strike protest by workers
ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರ ಬೆಂಬಲಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಕೇಂದ್ರ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ ಎಸ್‌ವಿಪಿ ವೃತ್ತ, ಡಿಸಿ ಕಚೇರಿ ಮಾರ್ಗವಾಗಿ ಜಗತ್ ವೃತ್ತದಲ್ಲಿ ಸಮಾವೇಶಗೊಂಡಿತು. ಮೆರವಣಿಗೆಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Last Updated : Feb 3, 2023, 8:21 PM IST