ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ- ವಿಡಿಯೋ - ಈಟಿವಿ ಭಾರತ ಕನ್ನಡ
ಚಿಕ್ಕಬಳ್ಳಾಪುರ: ಜಗತ್ತಿನ ಅತೀ ದೊಡ್ಡ ಆದಿಯೋಗಿ ಪ್ರತಿಮೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿದ್ದು, ಇದೀಗ ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿಯೂ ಸ್ಥಾಪಿಸಲಾಗಿದೆ. 112 ಅಡಿ ಎತ್ತರವಿರುವ ಪ್ರತಿಮೆಯನ್ನು ಮಕರ ಸಂಕ್ರಾಂತಿಯ ಶುಭದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಬ್ಬದ ದಿನದಂದೇ ಪ್ರತಿಮೆಯ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದರು. ವರ್ಣರಂಜಿತ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಸದ್ಗುರು ಜಗ್ಗಿ ವಾಸುದೇವ್ ಉಪಸ್ಥಿತರಿದ್ದರು. ಚಿಕ್ಕಬಳ್ಳಾಪುರದ ಆವಲಗುರ್ಕಿ ಬಳಿ ಆದಿಯೋಗಿ ಮೂರ್ತಿಯನ್ನು ಈಶ ಫೌಂಡೇಶನ್ ನಿರ್ಮಿಸಿದೆ. ಈ ಸ್ಥಳಕ್ಕೆ ಸದ್ಗುರು ಸನ್ನಿಧಿ ಎಂದು ಹೆಸರಿಡಲಾಗಿದೆ.