ಚಿಕ್ಕಮಗಳೂರು: 13 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ...! - chikmagaluru cobra
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ಸುರೇಶ್ ಎಂಬುವವರ ಮನೆಯ ಬೇಲಿ ಹಾಗೂ ಮನೆಯ ಸುತ್ತಮುತ್ತ ಬರೋಬ್ಬರಿ 13 ಅಡಿ ಉದ್ದದ ಕಾಳಿಂಗ ಸರ್ಪ ಓಡಾಡುತ್ತಿತ್ತು. ಸುರೇಶ್ ಮೂಡಿಗೆರೆಯ ಉರಗ ತಜ್ಞ ಆರೀಫ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಆರೀಫ್ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಅದರ ಆರೈಕೆ ಮಾಡಿದ್ದಾರೆ. ನಂತರ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಚಾರ್ಮಾಡಿ ಘಾಟ್ನ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
Last Updated : Feb 3, 2023, 8:23 PM IST