ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ.. ಇಬ್ಬರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ - mandya crime news
ಮಂಡ್ಯ: ಕಾರು ಮತ್ತು ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಬಳಿ ನಡೆದಿದೆ. ಕಾರು ಮತ್ತು ಬೊಲೆರೊ ಗೂಡ್ಸ್ ವಾಹನ ನಡುವೆ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮದಲಿಯಮ್ಮ(50), ಜೋಸ್ಮಿನ್ ಮೇರಿ(60) ಎಂಬುವರು ಮೃತಪಟ್ಟಿದ್ದಾರೆ. ಇವರು ಕೊಳ್ಳೇಗಾಲ ತಾಲ್ಲೂಕಿನ ಶಿಂಷಾ ಬಳಿಯ ಜಾಗೇರಿ ಗ್ರಾಮದ ಮೂಲದವರಾಗಿದ್ದಾರೆ. ಶಿಂಷಾದ ಮಾರಮ್ಮ ದೇವಸ್ಥಾನದಿಂದ ವಾಪಸ್ಸಾಗುತ್ತಿದ್ದಾಗ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳನ್ನು ಮಳವಳ್ಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಎಲ್ಲಾ ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್)ಗೆ ರವಾನೆ ಮಾಡಲಾಗಿದೆ. ಈ ಕುರಿತು ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಡಿವೈಡರ್ಗೆ ಗುದ್ದಿ ಪಲ್ಟಿಯಾದ ಬಸ್.. 15 ಪ್ರಯಾಣಿಕರಿಗೆ ಗಾಯ: ಭೀಕರ ವಿಡಿಯೋ