ಬಳ್ಳಾರಿಯಲ್ಲಿ 23 ಅಡಿ ಎತ್ತರದ ಡಾ.ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ - ETV Bharat Kannada News
ಬಳ್ಳಾರಿ:ನಗರದ ಜಿಲ್ಲಾ ಕ್ರೀಡಾಂಗಣದ ನಲ್ಲಚೇರುವು ಕೆರೆ ಪಕ್ಕದಲ್ಲಿ ನಿಲ್ಲಿಸಲಾಗಿರುವ 23 ಅಡಿ ಎತ್ತರದ ಕರ್ನಾಟಕ ರತ್ನ, ನಟ ದಿ.ಡಾ.ಪುನೀತ್ ರಾಜಕುಮಾರ್ ಅವರ ಪುತ್ಥಳಿಯನ್ನು ರಾಜ್‌ಕುಮಾರ್ ಕುಟುಂಬದವರು ಹಾಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಶನಿವಾರ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಗೊಂಬೆ ಹೇಳುತೈತೆ ಹಾಡು ಹಾಡಿ ಅಪ್ಪುವಿನ ಸ್ಮರಣೆ ಮಾಡಿದರು. ಹಾಡಿಗೆ ಧ್ವನಿಗೂಡಿಸಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು. ಮತ್ತೊಂದೆಡೆ, ವೇದಿಕೆ ಮುಂಭಾಗ ಅಭಿಮಾನಿಗಳು ಬರಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಅಶ್ವಿನಿ ಪುನೀತ್ ರಾಜಕುಮಾರ್, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಸಹಾಯಕ ಆಯುಕ್ತ ಹೇಮಂತ್, ಎಡಿಸಿ ಮಂಜುನಾಥ, ಪಾಲಿಕೆ ಆಯುಕ್ತ ಜಿ.ರುದ್ರೇಶ್ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ :ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜ್‌ಕುಮಾರ್ ವಿಷಯ