ತುಂಬಿ ಹರಿಯುತ್ತಿರುವ ನದಿಗಳು.. ಬಸವಸಾಗರ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ - ನಾರಾಯಣಪುರ ಅಣೆಕಟ್ಟಿನಲ್ಲಿ 28 ಟಿಎಂಸಿ ನೀರು ಸಂಗ್ರಹ
ಕಲ್ಯಾಣ ಕರ್ನಾಟಕದ ಅತಿ ದೊಡ್ಡ ಹಾಗೂ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಅನ್ನದಾತರ ಜೀವನಾಡಿಯಾಗಿರುವ ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಸದ್ಯ 28.08 ಟಿಎಂಸಿ ನೀರು ಸಂಗ್ರಹವಾಗಿದೆ. ಬಸವಸಾಗರ ಜಲಾಶಯ ಭರ್ತಿಯಾಗಿದ್ದು, ಎರಡು ದಿನದಲ್ಲಿ ಡ್ಯಾಂ ಗೇಟ್ಗಳ ಮೂಲಕ ಕೃಷ್ಣಾನದಿಗೆ ನೀರನ್ನು ಹರಿಸಲಾಗುತ್ತಿದೆ. ಈ ಪ್ರಯುಕ್ತ ನದಿ ಪಾತ್ರದ ಗ್ರಾಮಗಳ ಜನರಿಗೆ ನದಿಗಿಳಿಯದಂತೆ ಎಚ್ಚರಿಕೆ ವಹಿಸಲು ಡಂಗೂರ ಸಾರಿ ಜಾಗೃತಿ ಮೂಡಿಸಲಾಗುತ್ತಿದೆ.
Last Updated : Feb 3, 2023, 8:24 PM IST