ಮಲೆ ಮಹದೇಶ್ವರ ಬೆಟ್ಟದ ಆನೆಗೆ ₹ 5 ಲಕ್ಷ ಆರೋಗ್ಯ ವಿಮೆ
ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆರೋಗ್ಯ ವಿಮೆ ಮಾಡಿಸಿದೆ. 5 ಲಕ್ಷ ಮೌಲ್ಯದ ವಿಮೆ ಮಾಡಿಸಲಾಗಿದ್ದು, ವರ್ಷಕ್ಕೆ 11 ಸಾವಿರ ರೂ.ಗಳನ್ನು ಪ್ರಾಧಿಕಾರ ಪಾವತಿಸಲಿದೆ. ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್ಷದ ಹೆಣ್ಣಾನೆಯ ಆರೋಗ್ಯ ತಪಾಸಣೆ ಮಾಡಿಸಿದರು. ಪಶುವೈದ್ಯರು ತಪಾಸಣೆ ಮಾಡಿದ್ದು, ಆನೆ ಆರೋಗ್ಯದಿಂದ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮಾದಪ್ಪನ ಬೆಟ್ಟದಲ್ಲಿ ಅದ್ಧೂರಿ ಯುಗಾದಿ ರಥೋತ್ಸವ: ನೋಡಿ ವೈಮಾನಿಕ ದೃಶ್ಯ!
'ಅರಣ್ಯ ಇಲಾಖೆಯ ನಿಯಮದ ಪ್ರಕಾರ ಸಾಕಾನೆಗೆ ವಿಮೆ ಮಾಡಿಸಬೇಕು. ಎರಡೂವರೆ ವರ್ಷಗಳಿಂದ ವಿಮೆ ಮಾಡಿರಲಿಲ್ಲ. ಈಗ ಆರೋಗ್ಯ ತಪಾಸಣೆ ಮಾಡಿಸಿ, ವಿಮೆ ಮಾಡಿದ್ದೇವೆ' ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಸ್. ಕಾತ್ಯಾಯಿನಿ ದೇವಿ ಮಾಹಿತಿ ನೀಡಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹಲವಾರು ವರ್ಷಗಳಿಂದ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ ಉಮಾ ಮಹೇಶ್ವರಿ ಅನೆ ಭಕ್ತರಿಗೂ ಅಚ್ಚು ಮೆಚ್ಚಾಗಿದೆ.
ಇದನ್ನೂ ಓದಿ:ಅಮಾವಾಸ್ಯೆ: ನಿರೀಕ್ಷೆಗೂ ಮೀರಿ ಮಾದಪ್ಪನ ಬೆಟ್ಟಕ್ಕೆ ಭಕ್ತರ ದಂಡು, ಬಿಸಿಲಿನಲ್ಲೂ ವಿವಿಧ ಉತ್ಸವ