ಅಬಕಾರಿ ಇಲಾಖೆಯ ಭರ್ಜರಿ ಕಾರ್ಯಾಚರಣೆ ಬರೋಬ್ಬರಿ 54 ಲಕ್ಷ ಮೌಲ್ಯದ ಮದ್ಯ ವಶ - election update
ನೆಲಮಂಗಲ:ಕರ್ನಾಟಕ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಬುಧವಾರ(ಮಾ.29)ದಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆ ರಾಜ್ಯ ಅಬಕಾರಿ ಇಲಾಖೆ ಹೈ ಅಲರ್ಟ್ ಆಗಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅಬಕಾರಿ ಉಪ ಆಯುಕ್ತರಾದ ನಾಗೇಶ್ ಕುಮಾರ್ ಹಾಗೂ ಅಬಕಾರಿ ಉಪಾಧೀಕ್ಷರಾದ ಪರಮೇಶ್ವರಪ್ಪ ಮತ್ತು ಸಿಬ್ಬಂದಿಗಳು ಗಸ್ತು ತಿರುಗುವ ಸಮಯದಲ್ಲಿ ದಾಬಸ್ಪೇಟೆ ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಲಾರಿ ತಡೆದು ಪರಿಶೀಲನೆ ನಡೆಸಿದಾಗ ಡ್ರೈವರ್ ಕ್ಯಾಬಿನ್ನಲ್ಲಿ ಇದ್ದ 18 ಲೀಟರ್ ಮದ್ಯ ಹಾಗೂ 30 ಸಾವಿರ ಲೀಟರ್ನಷ್ಟು ಸ್ಪಿರಿಟ್ ಪತ್ತೆಯಾಗಿತ್ತು. ಯಾವುದೇ ನೈಜ ದಾಖಲೆಗಳು ಕಂಡುಬರದೇ ಇದ್ದ ಕಾರಣ ವಾಹನ ಸಮೇತ ಚಾಲಕ ಶ್ರೀಧರ್ನನ್ನು ವಶಕ್ಕೆ ಪಡೆಯಾಲಾಗಿದ್ದು, ವಶಪಡಿಸಿಕೊಂಡ ಮದ್ಯದ ಮೌಲ್ಯ 54 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು, ನೆಲಮಂಗಲ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಇಂದಿನಿಂದ ನೀತಿ ಸಂಹಿತೆ ಜಾರಿ.. ಗಡಿಭಾಗದ ಚೆಕ್ ಪೋಸ್ಟ್ಗಳಲ್ಲಿ ಅಧಿಕಾರಿಗಳು ಅಲರ್ಟ್