ಮೈ ಮೇಲೆಲ್ಲ ಸಿದ್ದು, ಹುಲಿಯಾ ಎಂದು ಬರೆಸಿಕೊಂಡ ಕೊಳ್ಳೇಗಾಲದ ಅಭಿಮಾನಿ! - karanataka new chief minister
ಚಾಮರಾಜನಗರ:ರಾಜ್ಯದ ಮುಖ್ಯಮಂತ್ರಿ ಆಗಿ ಗದ್ದುಗೆ ಏರಿರುವ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಶುಭ ಕೋರುವ ಸಲುವಾಗಿ ಕೊಳ್ಳೇಗಾಲದ ಬಸ್ತಿಪುರ ಗ್ರಾಮದ ಮಲ್ಲೇಶ್ ಎಂಬವರು ಬಣ್ಣಗಳ ಮೊರೆ ಹೋಗಿದ್ದಾರೆ. ಮೈಮೇಲೆಲ್ಲಾ ಹುಲಿಯಾ, ಸಿಎಂ ಸಿದ್ದರಾಮಯ್ಯ, ಸಿಎಂ ಸಿದ್ದು ಎಂದು ಬರೆಸಿಕೊಂಡು ಅಭಿಮಾನ ಮೆರೆದಿದ್ದಾರೆ. ಚಾಮರಾಜನಗರ ಜಿಲ್ಲೆಯಿಂದಲೂ ಸಾವಿರಾರು ಮಂದಿ ಅಭಿಮಾನಿಗಳು ಪ್ರಮಾಣವಚನ ಕಾರ್ಯಕ್ರಮ ನೋಡಲು ರಾಜಧಾನಿಗೆ ಲಗ್ಗೆ ಇಟ್ಟಿದ್ದಾರೆ. ಚಾಮರಾಜನಗರದ ಮೇಲೆ ವಿಶೇಷ ಅಭಿಮಾನ ಇಟ್ಟುಕೊಂಡಿರುವ ಸಿದ್ದುಗೆ ಗಡಿಜಿಲ್ಲೆಯಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಸಿದ್ದು, ಡಿಕೆಶಿ ಪ್ರಮಾಣವಚನ ಸ್ವೀಕಾರ:ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ, ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ಹಲವಾರು ನಾಯಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದನ್ನು ಓದಿ:ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನಕ್ಕೆ ಹರಿದು ಬಂದ ಜನಸಾಗರ.. ಕಂಠೀರವ ಕ್ರೀಡಾಂಗಣದಲ್ಲಿ ಮೊಳಗಿದ ಜಯಘೋಷ