ರಾಗಿ ಖರೀದಿ ಕೇಂದ್ರದಲ್ಲಿ ಅಗ್ನಿ ಅವಘಡ: 3 ಲಕ್ಷ ರೂ. ಮೌಲ್ಯದ ಬೆಳೆ ಬೆಂಕಿಗಾಹುತಿ - fire broke out at a millet buying center
ನೆಲಮಂಗಲ: ಸೋಲೂರಿನ ಗದ್ದುಗೆ ಮಠದ ಸಮೀಪದ ರಾಗಿ ಖರೀದಿ ಕೇಂದ್ರದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುಮಾರು 1,000 ಚದರ ಆಡಿ ವಿಸ್ತೀರ್ಣದ ಗೋದಾಮು ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಖಾಲಿ ಚೀಲಗಳ ರಾಶಿಗೆ ಬೆಂಕಿ ಬಿದ್ದ ಪರಿಣಾಮ ರಾಗಿ ಖರೀದಿ ಕೇಂದ್ರ ಹೊತ್ತಿ ಉರಿದಿದೆ. ಅಗ್ನಿ ಅವಘಡದಿಂದಾಗಿ ಸುಮಾರು 3 ಲಕ್ಷ ರೂ. ಮೌಲ್ಯದ ರಾಗಿ ಬೆಂಕಿಗಾಹುತಿಯಾಗಿದೆ.
ಇದನ್ನೂ ಓದಿ:ಬೆಂಗಳೂರಿನ ಜಿಟಿ ಗ್ಯಾರೇಜ್ ಟೆಕ್ನಲ್ಲಿ ಅಗ್ನಿ ಅವಘಡ: 10ಕ್ಕೂ ಅಧಿಕ ಕಾರುಗಳು ಸುಟ್ಟು ಭಸ್ಮ