ಕರ್ನಾಟಕ

karnataka

ಗ್ಯಾಸ್​ ಸಿಲಿಂಡರ್​ ಸ್ಫೋಟ

ETV Bharat / videos

ಗ್ಯಾಸ್​ ಸಿಲಿಂಡರ್​ ಸ್ಫೋಟ.. ಆಂಧ್ರದಲ್ಲಿ 15 ಗುಡಿಸಲುಗಳು ಭಸ್ಮ; ಹೈದರಾಬಾದ್​​​​​​ನಲ್ಲಿ ಕುಟುಂಬವೊಂದನ್ನು ರಕ್ಷಿಸಿದ ಕಾನ್ಸ್​​ಟೇಬಲ್​

By ETV Bharat Karnataka Team

Published : Dec 22, 2023, 10:28 AM IST

Updated : Dec 22, 2023, 10:53 AM IST

ನಲ್ಲಜೆರ್ಲ(ಆಂಧ್ರಪ್ರದೇಶ):ಆಂಧ್ರಪ್ರದೇಶದ ಪೂರ್ವ ಗೋದಾವರಿಯ ನಲ್ಲಜೆರ್ಲಎಂಬಲ್ಲಿ ಗುರುವಾರ ರಾತ್ರಿ ಮನೆಯೊಂದರಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಗಳನ್ನು ಆವರಿಸಿ 15 ಗುಡಿಸಲುಗಳು ಸುಟ್ಟು ಕರಕಲಾಗಿವೆ. ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡ ಬಳಿಕ ಮತ್ತೂ 3 ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಹೀಗೆ ಒಟ್ಟು 15 ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಹೈದರಾಬಾದ್: ಇನ್ನೊಂದೆಡೆ ಹೈದರಾಬಾದ್​​ನ ಪಂಜಗುಟ್ಟದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಆರನೇ ಮಹಡಿಯಲ್ಲಿ ಸಿಲುಕಿದ್ದ ಕುಟುಂಬವನ್ನು ಟ್ರಾಫಿಕ್ ಕಾನ್ಸ್​ಟೇಬಲ್​ ಬಾಗಿಲು ಒಡೆದು ಕಾಪಾಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.

ಹಿಂದಿನ ಪ್ರಕರಣ:ಇದೇ ಡಿಸೆಂಬರ್​ 14 ರಂದುರಂಗಾ ರೆಡ್ಡಿ ಜಿಲ್ಲೆಯ ರಾಜೇಂದ್ರ ನಗರದ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದ. ಜತೆಗೆ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ನವೆಂಬರ್​ ತಿಂಗಳಿನಲ್ಲಿ ವಿಜಯನಗರದಲ್ಲಿ ಮನೆಯೊಂದರಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಮನೆಯ 5 ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ :ದರೋಡೆಕೋರರು​, ಪೊಲೀಸರ ಮಧ್ಯೆ ಗುಂಡಿನ ದಾಳಿ; ಇಬ್ಬರು ಆರೋಪಿಗಳ ಸೆರೆ                 

Last Updated : Dec 22, 2023, 10:53 AM IST

ABOUT THE AUTHOR

...view details