ಹಾವೇರಿಯಲ್ಲಿ ಮತ್ತೊಂದು ಚಿರತೆ ಬೋನಿಗೆ ಸೆರೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - ವಿಡಿಯೋ
ಹಾವೇರಿ:ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಾಡಲ್ಲಿರಬೇಕಾದ ಚಿರತೆ ನಾಡಿಗೆ ಬಂದು ದಾಳಿ ನಡೆಸುವುದಲ್ಲದೇ ರಾಜಾರೋಷವಾಗಿ ಓಡಾಡುತ್ತಿವೆ. ಚಿರತೆಯನ್ನು ಕಂಡಿರುವ ಗ್ರಾಮಸ್ಥರು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇದೀಗ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿನ್ನಮುಳಗುಂದ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಕಳೆದ ಕೆಲವು ದಿನಗಳಿಂದ ಚಿರತೆ ಓಡಾಟದಿಂದ ಆತಂಕಕ್ಕೆ ಒಳಗಾಗಿದ್ದರು. ಗ್ರಾಮಸ್ಥರಿಗೆ ಹೆಚ್ಚು ಭಯ ಹುಟ್ಟಿಸಿದ ಚಿರತೆ ಇದೀಗ ಬೋನಿಗೆ ಬಿದ್ದಿರುವುದು ಗ್ರಾಮಸ್ಥರನ್ನು ನಿಟ್ಡುಸಿರು ಬಿಡುವಂತೆ ಮಾಡಿದೆ. ಚಿರತೆಯ ಹೆಜ್ಜೆಗುರುತು ನೋಡಿ ಅರಣ್ಯ ಇಲಾಖೆಯ ಸಿಬ್ಬಂದಿ ಬೋನು ಇಟ್ಟಿದ್ದರು. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಕೊಪ್ಪಳ ಜಿಲ್ಲೆಯಲ್ಲಿ ಜೂನ್ 18ರಂದು ಬೆಳಗ್ಗೆ ಗಂಗಾವತಿ ಮುಖ್ಯರಸ್ತೆಯ ಪಕ್ಕದಲ್ಲಿರುವ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅವರ ಬೆಣಕಲ್ ತೋಟದಲ್ಲಿ, ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬೇಟೆ ಅರಸಿ ಬಂದಿದ್ದ ಒಂದೂವರೆ ವರ್ಷದ ಗಂಡು ಚಿರತೆ ನಾಯಿ ಮೇಲೆ ದಾಳಿ ಮಾಡುವ ರಭಸದಲ್ಲಿ ಬೋನಿನಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ:ಹಾವೇರಿ: ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿರಾಳ