ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು: ಮುಗಿಬಿದ್ದು ಫೋಟೋ ಕ್ಲಿಕ್ಕಿಸಿಕೊಂಡ ಜನ! - ಅರಣ್ಯ ಇಲಾಖೆ ಸಿಬ್ಬಂದಿ
ಕಾರವಾರ: ಅಪರಿಚಿತ ವಾಹನ ಗುದ್ದಿ ಸುಮಾರು 8 ವರ್ಷ ಪ್ರಾಯದ ಚಿರತೆ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಸಮೀಪದ ಬೆಟ್ಕುಳಿ ಬಳಿ ನಡೆದಿದೆ. ಕಾಡಂಚಿನಿಂದ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ರಸ್ತೆಯಂಚಿಗೆ ಬಿದ್ದಿತ್ತು. ವಾಹನ ಸವಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಸಿಬ್ಬಂದಿ, ಪರಿಶೀಲನೆ ನಡೆಸಿ ಕಳೇಬರವನ್ನು ಮರಣೋತ್ತರ ಪರೀಕ್ಷೆಗಾಗಿ ಕುಮಟಾಕ್ಕೆ ಕಳುಹಿಸಿದ್ದಾರೆ. ಇದಕ್ಕೂ ಮುನ್ನ, ಮೃತ ಚಿರತೆ ನೋಡಲು ಜನರು ಮುಗಿಬಿದ್ದು ಫೋಟೋ ಕ್ಲಿಕ್ಕಿಸಿಕೊಂಡರು.