ಕರ್ನಾಟಕ

karnataka

ಮಂಗಳೂರು : ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಮಾನಸಿಕ ಅಸ್ವಸ್ಥ

ETV Bharat / videos

ಮಂಗಳೂರು : ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಮಾನಸಿಕ ಅಸ್ವಸ್ಥ - ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯ ಕೊಳ್ನಾಡು

By ETV Bharat Karnataka Team

Published : Sep 30, 2023, 10:27 PM IST

ಮಂಗಳೂರು :  ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಕೊಳ್ನಾಡುವಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಈ ವ್ಯಕ್ತಿಯನ್ನು ವಿಜಯಪುರದ ಸತೀಶ್​ ಎಂದು ಗುರುತಿಸಲಾಗಿದೆ. ವ್ಯಕ್ತಿಯು ಮಾನಸಿಕ ಅಸ್ವಸ್ಥನಾಗಿದ್ದು, ಈ ಕೃತ್ಯದ ಹಿಂದೆ ಯಾವುದೇ  ದುರುದ್ದೇಶ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮುಲ್ಕಿಯ ಕೊಳ್ಳಾಡುವಿನಲ್ಲಿರುವ ಮೊಬೈಲ್ ಟವರ್​​​ವೊಂದಕ್ಕೆ ವ್ಯಕ್ತಿಯೊಬ್ಬ ಹತ್ತಿದ್ದಾನೆ. ಮೊಬೈಲ್ ಟವರ್​ನ ತುತ್ತ ತುದಿಗೆ ಹತ್ತಿದ ವ್ಯಕ್ತಿ ಮೇಲೆ ಕುಳಿತು ಕೆಲಕಾಲ ಆತಂಕ ಸೃಷ್ಟಿಸಿದ್ದಾನೆ. ಈ ಬಗ್ಗೆ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬಳಿಕ 12 ಗಂಟೆಯ ಸುಮಾರಿಗೆ ವ್ಯಕ್ತಿಯು ಟವರ್​​ನಿಂದ ಕೆಳಗೆ ಇಳಿದು ಬಂದಿದ್ದಾನೆ. ಈ ವ್ಯಕ್ತಿಯು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯವು ಮೊಬೈಲಿನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ :  ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಅಗ್ನಿಗಾಹುತಿ: ವಿಡಿಯೋ

ABOUT THE AUTHOR

...view details