ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿಯಲ್ಲಿ ಉರುಳು ಸೇವೆ - ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿಯಲ್ಲಿ ಉರುಳು ಸೇವೆ
ಉಡುಪಿ: ಉಡುಪಿ ಮಣಿಪಾಲ್ ನಡುವೆ ಇರುವ ಇಂದ್ರಾಳಿ ರೈಲ್ವೆ ಸೇತುವೆ ಮೇಲಿನ ರಾಷ್ಱ್ರೀಯ ಹೆದ್ದಾರಿ 167A ದುರಸ್ತಿ ವಿಚಾರವಾಗಿ ಸೇತುವೆ ಮೇಲೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ಉರುಳುಸೇವೆ ಮಾಡುವ ಮೂಲಕ ವಿಶಿಷ್ಟ ಪ್ರತಿಭಟನೆ ನಡೆಸಿದರು. ಇಂದ್ರಾಳಿ ರೈಲ್ವೆ ಸೇತುವೆ ಹೆದ್ದಾರಿ ಕಾಮಗಾರಿ ಕಳೆದ ಐದು ವರ್ಷಗಳಿಂದ ನಡೆಯುತ್ತಿದ್ದು ಕಾಮಗಾರಿ ಹಂತದಲ್ಲಿರುವಾಗಲೇ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದೇ ರಸ್ತೆಯಲ್ಲಿ ಅಪಘಾತಗಳು ಸಂಭವಿಸಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಇತ್ತ ಗಮನಹರಿಸಿಲ್ಲ ಎಂದು ಹದಗೆಟ್ಟಿದ್ದ ಹೆದ್ದಾರಿಯ ಮೇಲೆಯೇ ಉರಳುಸೇವೆ ಮಾಡುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದರು.
Last Updated : Feb 3, 2023, 8:27 PM IST