ಶಾರ್ಟ್ ಸರ್ಕ್ಯೂಟ್ನಿಂದ ಮಕ್ಕಳಿದ್ದ ಶಾಲಾ ವಾಹನಕ್ಕೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ - ಈಟಿವಿ ಭಾರತ ಕನ್ನಡ
ವಿಜಯನಗರ:ಖಾಸಗಿ ಶಾಲಾ ಬಸ್ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶಾಲಾ ಬಸ್ಗೆ ಬೆಂಕಿ ತಗುಲಿದೆ ಎನ್ನಲಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಲಗಳ ಪ್ರಕಾರ ಮಕ್ಕಳನ್ನು ಹೊತ್ತು ಬಸ್ ಸಾಗುತ್ತಿತ್ತು. ಈ ವೇಳೆ, ಸಣ್ಣದಾಗಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಕಂಡ ಚಾಲಕ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲಿದ್ದ ಮಕ್ಕಳನ್ನು ಬಸ್ನಿಂದ ಕೆಳಗಿಳಿಸಿದ್ದಾರೆ. ಬಳಿಕ ಇಡೀ ಬಸ್ಗೆ ಬೆಂಕಿ ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ನಂತರ ಕೊಟ್ಟೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಮನೆಗೆ ಬೆಂಕಿ:ಕೆಲದಿನಗಳ ಹಿಂದೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಎರಡು ಮನೆಗಳಿಗೆ ಬೆಂಕಿ ತಗುಲಿದ್ದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಿವಾಜಿ ನಗರದಲ್ಲಿ ನಡೆದಿತ್ತು. ಘಟನೆಯಲ್ಲಿ 4 ಜನ ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ:ರಾತ್ರಿ ಮಲಗಿದ್ದ ವೇಳೆ ಎರಗಿದ ಜವರಾಯ, ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ 6 ಮಂದಿ ಬಲಿ