ಮಂಡ್ಯದಲ್ಲಿ ಆಟೋಚಾಲಕನ ಮೇಲೆ ಪೊಲೀಸ್ ಪೇದೆಯ ದರ್ಪ: ವಿಡಿಯೋ ವೈರಲ್ - viral videos
ಮಂಡ್ಯ:ಮಂಡ್ಯದಲ್ಲಿ ಪೊಲೀಸ್ ಪೇದೆಯೊಬ್ಬ ಆಟೋ ಚಾಲಕನ ಮೇಲೆ ಮನಬಂದಂತೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಿರಿಯ ಅಧಿಕಾರಿಗಳು ಕಾನ್ಸ್‌ಟೇಬಲ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ನಡು ರಸ್ತೆಯಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಆಟೋ ಚಾಲಕನ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ಮಂಗಳವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸಪ್ಪನ ದರ್ಪ ತೋರಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ಘಟನೆಯ ವಿಡಿಯೋ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿ ತನಿಖೆಗೆ ಆದೇಶಿಸಲಾಗಿದೆ. ಮಂಡ್ಯ ಜಿಲ್ಲಾಸ್ಪತ್ರೆಯ ಎದುರು ಆಟೋ ಚಾಲಕ ಮತ್ತು ಪೊಲೀಸರು ತೆರಳುತ್ತಿದ್ದ ಬೈಕ್ ನಡುವೆ ಅಪಘಾತವಾಗಿದೆ. ಪೊಲೀಸ್ ಪೇದೆ ರಸ್ತೆಗೆ ಬಿದ್ದು, ಕಾಲಿಗೆ ಸಣ್ಣ ಪೆಟ್ಟಾಗಿದೆ. ಸ್ಥಳೀಯರು ಪೇದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆಟೋ ಚಾಲಕನಿಗೆ ಹೇಳಿದ್ದಾರೆ. ಅದರಂತೆ ಚಾಲಕ ಪೇದೆಯನ್ನು ಆಸ್ಪತ್ರೆಗೆ ಹೋಗೋಣ ಬನ್ನಿ ಎಂದು ಕರೆದಿದ್ದಾರೆ. ಆತ ಕರೆದಾಗ ಸಿಟ್ಟಿಗೆದ್ದ ಪೇದೆ, ಚಾಲಕನ ಕಪಾಳಕ್ಕೆ ಹೊಡೆದಿದ್ದಾರೆ.
ಈ ಘಟನೆ ಸಂಬಂಧ ಯಾವುದೇ ದೂರು ದಾಖಲಿಸಿಲ್ಲ. ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ನ ದರ್ಪವನ್ನು ಖಂಡಿಸಿದ್ದಾರೆ. ಅಲ್ಲದೇ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಶ್ರೀಲಂಕಾದಿಂದ ಸಾಗಿಸಲಾಗುತ್ತಿದ್ದ 36 ಕೆ ಜಿ ಬಂಗಾರ ಜಪ್ತಿ ಮಾಡಿದ ಕೋಸ್ಟ್ ಗಾರ್ಡ್