ಗಂಗಾವತಿ: ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ಆಪ್ ಸದಸ್ಯರಿಂದ ಪ್ರತಿಭಟನೆ - aap activist protest on potholes
ಗಂಗಾವತಿ ನಗರದಲ್ಲಿರುವ ಪ್ರಮುಖ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಗೆ ಪೂಜೆ ಸಲ್ಲಿಸಿ ಕಾಯಿ ಒಡೆದು, ಕರ್ಪೂರದ ಆರತಿ ಬೆಳಗಿ ಭಜನೆ ಮೂಲಕ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ಮಾಡಿದರು. ನಗರದ ದುರುಗಮ್ಮನ ಗುಡಿಯಿಂದ ಇಂದಿರಾವೃತ್ತ, ಇಂದಿರಾವೃತ್ತದಿಂದ ಬೈಪಾಸ್ ಮೂಲಕ ಹೋಗುವ ರಸ್ತೆಗಳಲ್ಲಿ ದೊಡ್ಡ ಪ್ರಮಾಣದ ಗುಂಡಿಗಳಿವೆ. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ. ಕಳೆದ ಎಂಟು ತಿಂಗಳಿಂದಲೂ ನಗರದ ರಸ್ತೆಗಳು ಸಂಪೂರ್ಣ ಹಾಳಾಗಿದ್ದರೂ ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
Last Updated : Feb 3, 2023, 8:26 PM IST