ಅಥಣಿಯಲ್ಲಿ ಅಪಘಾತ, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು: ಸಿಸಿಟಿವಿಯಲ್ಲಿ ಸೆರೆ - ಬೆಳಗಾವಿ ಜಿಲ್ಲೆ
Published : Nov 22, 2023, 9:44 PM IST
ಚಿಕ್ಕೋಡಿ: ಟ್ರ್ಯಾಕ್ಟರ್ ಟ್ರೈಲರ್ ಕೊಂಡಿ ಕಳಚಿ ಪಕ್ಕದ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಅಥಣಿ ಪಟ್ಟಣದಲ್ಲಿ ಸಂಭವಿಸಿದ್ದು, ಈ ವೇಳೆ ಶಾಲೆಗೆ ಹೊರಟಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಎಸ್ ಎಂ ಎಸ್ ಕಾಲೇಜು ಹತ್ತಿರದ ರಡ್ಡೇರಹಟ್ಟಿ ರಸ್ತೆಯಲ್ಲಿ ಮಂಗಳವಾರ ಸಂಜೆ ಕಾರ್ಖಾನಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಟ್ರೈಲರ್ನ ಹಿಂಬದಿ ಟ್ರೈಲರ್ ಕೊಂಡಿ ಕಳಚಿದ ಪರಿಣಾಮ ಪಕ್ಕದ ಕಾರು,ಬೈಕ್ ,ಗೋಡೆಗೆ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ಟ್ರೈಲರ್ ರಸ್ತೆ ಪಕ್ಕದ ಫುಟ್ಪಾತ್ ಮೇಲೆ ಹರಿದು ಬಂದಿದ್ದು, ಈ ವೇಳೆ ಶಾಲೆಗೆ ಹೊರಟಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು ಆಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಘಟನೆ ಬಳಿಕ ಅಥಣಿ ಪಟ್ಟಣದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತು. ಆದರೆ, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರೈಲರ್ ಎದುರಿಗೆ ನಿಂತ ಕಾರು ಬೈಕ್ ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ನಜ್ಜುಗುಜ್ಜಾಗಿವೆ. ಈ ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂಓದಿ:ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಆಟೋ: ಎಂಟು ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ