ದೇವರ ದರ್ಶನ ಪಡೆದು ಹಿಂತಿರುಗುತ್ತಿದ್ದ ವಾಹನಕ್ಕೆ ಅಪಘಾತ: ವೃದ್ದೆ ಸಾವು - etv bharat karnataka
ಚಿಕ್ಕೋಡಿ: ಚಿಂಚಲಿ ಮಾಯಕ್ಕ ದೇವಿಯ ದರ್ಶನ ಪಡೆದುಕೊಂಡು ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಕಂಟೇನರ್ ಮತ್ತು ಕ್ರೂಸರ್ ವಾಹನದ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ವೃದ್ದೆಯೊಬ್ಬರು ಸಾವನ್ನಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಇನ್ನು ಈ ಅಪಘಾತದಲ್ಲಿ ಆರು ಜನ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕ ಯರಗಲ್ಲ (ಕೇಡಿ) ಗ್ರಾಮಸ್ಥರ ವಾಹನಕ್ಕೆ ಅಪಘಾತ ಸಂಭವಿಸಿದ್ದು, ದೇವಕಿ ನಿಂಗಣ್ಣ ಕೀಚಡಿ (65) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ಆರು ಜನಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ಮೂರು ಜನರನ್ನು ಪಕ್ಕದ ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನುಳಿದ ಮೂರು ಜನರನ್ನು ಅಥಣಿ ಸಮುದಾಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ .. ಯುವತಿಗೆ ಗಂಭೀರ ಗಾಯ, ಆರೋಪಿ ಬಂಧನ