ವಿಜಯನಗರ: ಕೂಡ್ಲಿಗಿ ಕಡೆ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ- ವಿಡಿಯೋ - Kanahosalli Police Station
ವಿಜಯನಗರ(ಬಳ್ಳಾರಿ): ಚಿತ್ರದುರ್ಗ ರಸ್ತೆ ಮಾರ್ಗವಾಗಿ ಕೂಡ್ಲಿಗಿ ಕಡೆ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಯಿತು. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವೀರಾಪುರ ಸರ್ವೀಸ್ ರಸ್ತೆಯ ಬಳಿ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೈವೇ ಪೆಟ್ರೋಲಿಂಗ್ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ಕಾನಾಹೊಸಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.
Last Updated : Feb 3, 2023, 8:36 PM IST