15ಕ್ಕೂ ಹೆಚ್ಚು ರೈತರ ಕಬ್ಬಿನ ಗದ್ದೆಗೆ ಬೆಂಕಿ: ಕಂಗಾಲಾದ ಅನ್ನದಾತ - ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ
ಬಳ್ಳಾರಿ: ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದ ಪರಿಣಾಮ 40 ಎಕರೆಗೂ ಹೆಚ್ಚು ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದಲ್ಲಿ ನಡೆದಿದೆ. ಒಂದು ವಾರದ ಅವಧಿಯಲ್ಲಿ ಕಟಾವಿಗೆ ತಯಾರಾಗಿದ್ದ ಸುಮಾರು 15ಕ್ಕೂ ಹೆಚ್ಚು ರೈತರ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಹರಸಾಹಸಪಟ್ಟರೂ ಸಾಧ್ಯವಾಗಿಲ್ಲ. ಬೆಳೆ ನಾಶದ ಪರಿಹಾರ ನೀಡುವಂತೆ ರೈತರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
Last Updated : Feb 3, 2023, 8:36 PM IST