ಅಕ್ರಮ ಗೋ ಹತ್ಯೆ ಆರೋಪ: ತಪಿತಸ್ಥರ ವಿರುದ್ದ ಕಠಿಣ ಕ್ರಮದ ಭರವಸೆ ನೀಡಿದ ಪೊಲೀಸ್ ಕಮಿಷನರ್ - ETV Bharath Karnataka
ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಕ್ರಮ ಕಸಾಯಿಖಾನೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗೋಹತ್ಯೆಯ ಕುರಿತಂತೆ ತನಿಖೆ ನಡೆಸಲು ಪೊಲೀಸ್ ಇಲಾಖೆ ಮುಂದಾಗಿದೆ. ಕಸಾಯಿಖಾನೆಯಲ್ಲಿ ನೂರಾರು ಗೋವುಗಳ ಹತ್ಯೆ ಮಾಡುತ್ತಿರುವ ಬಗ್ಗೆ ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ಗೆ ವಿಡಿಯೋ ಮೂಲಕ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣ ಗುಪ್ತಾ ತನಿಖೆ ನಡೆಸಿ ಕಾನೂನು ಕ್ರಮಗಳನ್ನು ಜರುಗಿಸುವ ಭರವಸೆ ನೀಡಿದ್ದಾರೆ.
ಪೊಲೀಸ್ ಕಮೀಷನರ್ ರಮಣ ಗುಪ್ತಾ ಅವರು ಮಾತನಾಡಿ," ದೂರು ಸ್ವೀಕರಿಸಲಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಯಾರೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದರೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ವಾಣಿಜ್ಯ ನಗರಿಯಲ್ಲಿ ಗೋ ಹತ್ಯೆ: ವಿಡಿಯೋ ಮೂಲಕ ಕಮೀಷನರ್ಗೆ ದೂರು ಕೊಟ್ಟ ವಿಹೆಚ್ಪಿ