ಕರ್ನಾಟಕ

karnataka

ಮಲೆಮಹದೇಶ್ವರ ಬೆಟ್ಟಕ್ಕೆ ನಟ ದರ್ಶನ್ ಭೇಟಿ

ETV Bharat / videos

ಮಲೆ ಮಹದೇಶ್ವರ ಬೆಟ್ಟಕ್ಕೆ ನಟ ದರ್ಶನ್ ಭೇಟಿ: ಡಿಬಾಸ್ ನೋಡಲು ಮುಗಿಬಿದ್ದ ಬೆಟ್ಟಕ್ಕೆ ಬಂದ ಭಕ್ತರು!! - ETV Bharath Kannada news

By

Published : Feb 13, 2023, 3:54 PM IST

Updated : Feb 14, 2023, 11:34 AM IST

ಚಾಮರಾಜನಗರ:ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರು ಇಂದು ತಮ್ಮ ಸ್ನೇಹಿತರ ಜೊತೆ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ದರ್ಶನ್ ಅವರನ್ನು ಗೌರವಿಸಲಾಯಿತು. ಮುದ್ದು ಮಾದಪ್ಪನಿಗೆ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುವಾಗ ನೆಚ್ಚಿನ ನಟನನ್ನು ಕಾಣಲು ಬೆಟ್ಟಕ್ಕೆ ಬಂದಿದ್ದ ಭಕ್ತರು ಮುಗಿ ಬಿದ್ದರು. ಜನದಟ್ಟನೆ ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಇನ್ನು, ನಟ ದರ್ಶನ್ ಜೊತೆ ಪೊಲೀಸರು ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟಿದ್ದಾರೆ. 

ಇದನ್ನೂ ಓದಿ:ಮೋದಿ ಔತಣಕೂಟದಲ್ಲಿ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು​: ಯಶ್, ರಿಷಬ್ ಶೆಟ್ಟಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಭಾಗಿ

Last Updated : Feb 14, 2023, 11:34 AM IST

ABOUT THE AUTHOR

...view details