ಮಾದಪ್ಪನ ಬೆಟ್ಟಕ್ಕೆ ರಾಘಣ್ಣ ಕುಟುಂಬ ಭೇಟಿ.. ವಿಶೇಷ ಪೂಜೆ-ವಿಡಿಯೋ - ಮಲೆಮಹದೇಶ್ವರ ಬೆಟ್ಟ
Published : Oct 2, 2023, 2:43 PM IST
ಚಾಮರಾಜನಗರ:ಪ್ರಸಿದ್ಧ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ನಟ ರಾಘವೇಂದ್ರ ರಾಜ್ಕುಮಾರ್ ಕುಟುಂಬಸ್ಥರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪವಾಡ ಪುರುಷ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಕ್ಕೆ ರಾಘವೇಂದ್ರ ರಾಜಕುಮಾರ್, ಪತ್ನಿ ಮಂಗಳಾ, ಕಿರಿಯ ಪುತ್ರ ಯುವ ರಾಜಕುಮಾರ್ ಅವರು ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾದಪ್ಪನ ದರ್ಶನ ಪಡೆದು, ದಾಸೋಹ ಭವನದಲ್ಲಿ ಪ್ರಸಾದ ಸೇವನೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ರಾಘವೇಂದ್ರ ರಾಜಕುಮಾರ್ ಅವರು, ನಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಬಳಿಕ ಈ ಸ್ಥಳಕ್ಕೆ ಬಂದಿರಲಿಲ್ಲ. ಪುತ್ರ ಯುವ ರಾಜಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೀತಿದೆ. ಅದಕ್ಕಾಗಿ ಮಾದಪ್ಪನ ದರ್ಶನ ಪಡೆಯಲು ಬಂದಿದ್ದೇವೆ. ಈ ಜಾಗ ತುಂಬಾ ಚೆನ್ನಾಗಿದೆ. ಮಲೆಮಹದೇಶ್ವರ ತಾಣ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಂದು ಸಲವಾದರೂ ಇಲ್ಲಿಗೆ ಬರಬೇಕು ಅಂತ ಅನ್ನಿಸಿದೆ. ಇನ್ನು ಮುಂದೆ ಮಾದಪ್ಪನ ದರ್ಶನ ಪಡೆಯಲು ಬರ್ತಿನಿ ಎಂದು ರಾಘಣ್ಣ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಿಖಿಲ್ ಶೂಟಿಂಗ್ ಸೆಟ್ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ... ಅಭಿಮಾನಿಗಳಲ್ಲಿ ಕುತೂಹಲ