ಸ್ಯಾಂಡಲ್ವುಡ್ ನಟಿಯ ಬೇಡಿಕೆ ಈಡೇರಿಸಿದ ಕೊರಗಜ್ಜ.. ಕುತ್ತಾರು ಆದಿಸ್ಥಳಕ್ಕೆ ಆಗಮಿಸಿ ಹರಕೆ ತೀರಿಸಿದ ಮಾಲಾಶ್ರೀ - ಕೊರಗಜ್ಜ ಕುತ್ತಾರು ಆದಿಸ್ಥಳಕ್ಕೆ ಆಗಮಿಸಿದ ನಟಿ ಮಾಲಾಶ್ರೀ
ಉಳ್ಳಾಲ (ದಕ್ಷಿಣ ಕನ್ನಡ) : ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ವುಡ್ನ ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ (ರಾಧನಾ ರಾಮ್) ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆನು. ದೈವಬಲದಿಂದ ಅಂದುಕೊಂಡ ಎಲ್ಲಾ ಕಾರ್ಯ ನಡೆದಿದೆ. ಕ್ಷೇತ್ರದ ಶಕ್ತಿಯನ್ನು ಹೇಳತೀರದು ಎಂದು ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಬುರ್ದುಗೋಳಿ ಕೊರಗಜ್ಜ-ಗುಳಿಗಜ್ಜ ಕ್ಷೇತ್ರಕ್ಕೆ 'ಕರಿ ಹೈದ ಕರಿಯಜ್ಜ' ಚಿತ್ರತಂಡ ಭೇಟಿ, ಹರಕೆ ಸಲ್ಲಿಕೆ
"ಈ ಕ್ಷೇತ್ರದಲ್ಲಿ ಬಹಳಷ್ಟು ಪಾಸಿಟಿವ್ ಎನರ್ಜಿ ಇದೆ. ದೇವಾಲಯದ ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ. ಬೇಡಿಕೆ ಈಡೇರಿದ ಬೆನ್ನಲ್ಲೇ ಹರಕೆ ತೀರಿಸಿ, ದೇವರ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತಿರುತ್ತೇನೆ" ಎಂದರು. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಟ್ರಸ್ಟ್ನ ಸದಸ್ಯರು ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿಯನ್ನು ಸನ್ಮಾನಿಸಿದರು.
ಇದನ್ನೂ ಓದಿ :ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ.. ವಿಶೇಷ ಪೂಜೆ