ಕರ್ನಾಟಕ

karnataka

ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟಿ ರಕ್ಷಿತಾ ಪ್ರೇಮ್

ETV Bharat / videos

ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟಿ ರಕ್ಷಿತಾ ಪ್ರೇಮ್ - ತಾಯಿ ಚಾಮುಂಡೇಶ್ವರಿಯ ದರ್ಶನ

By

Published : Jul 28, 2023, 9:24 PM IST

ಮೈಸೂರು :ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ನಟಿ ರಕ್ಷಿತಾ ಆಗಮಿಸಿರುವ ಸುದ್ದಿ ತಿಳಿದು ಸ್ಥಳೀಯರು ಹಾಗೂ ಅಭಿಮಾನಿಗಳು, ರಕ್ಷಿತಾ ಅವರ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಈ ವೇಳೆ ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. 

ಪ್ರತಿವರ್ಷ ಆಷಾಢ ಮಾಸದ ತಿಂಗಳಿನಲ್ಲಿ ರಕ್ಷಿತಾ ಅವರು ಚಾಮುಂಡಿಬೆಟ್ಟಕ್ಕೆ ಬಂದು, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ. ನಟಿ ರಕ್ಷಿತಾ ಅವರು ದೇವಸ್ಥಾನಕ್ಕೆ ಬಂದಿದ್ದರಿಂದ, ತುಂಬಾ ಜನ ಭಕ್ತಾದಿಗಳು ನೂಕು ನುಗ್ಗಲಿನಲ್ಲಿ ಕಾಯುವಂತಾಯಿತು.

ನಾಡ ಅಧಿದೇವತೆಗೆ ನಾಗಲಕ್ಷ್ಮಿ ಅಲಂಕಾರ:ಕೊನೆಯ ಆಷಾಢ ಶುಕ್ರವಾರದ ಪ್ರಯುಕ್ತ (ಜುಲೈ 14-2023) ನಾಡ ಅಧಿದೇವತೆಗೆ ವಿಶೇಷ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಇದರ ಜೊತೆಗೆ ದೇವಾಲಯದ ಒಳಭಾಗದಲ್ಲಿ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರು ಬೆಳಗ್ಗೆಯಿಂದ ರಾತ್ರಿಯವರೆಗೆ ತಾಯಿಯ ದರ್ಶನ ಪಡೆದರು. ಭಕ್ತರ ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ ಹಾಗೂ ಬಿಗಿಯಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಬೆಳಗ್ಗೆ 3:30 ರಿಂದಲೇ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಗಿತ್ತು.

ಇದನ್ನೂ ಓದಿ:ಚಾಮುಂಡಿ ಬೆಟ್ಟದಲ್ಲಿ ಕೊನೆಯ ಆಷಾಢ ಶುಕ್ರವಾರ ಸಂಭ್ರಮ... ನಾಡ ಅಧಿದೇವತೆಗೆ ನಾಗಲಕ್ಷ್ಮೀ ಅಲಂಕಾರ

ABOUT THE AUTHOR

...view details