ಎಐಸಿಸಿ ಅಧ್ಯಕ್ಷ ಚುನಾವಣೆ ಫಲಿತಾಂಶ: ಖರ್ಗೆ ಆಯ್ಕೆಗಾಗಿ ಅಭಿಮಾನಿಗಳಿಂದ ದೀರ್ಘದಂಡ ನಮಸ್ಕಾರ - AICC Election Result
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗಾಗಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಕಲಬುರಗಿಯ ಶರಣಬಸವೇಶ್ವರ ದೇವರಿಗೆ, ಖಾಜಾ ಬಂದೆ ನವಾಜ್ ದರ್ಗಾ ಸೇರಿ ಹಲವಡೆ ಪೂಜೆ ಸಲ್ಲಿಸಿ ಅವರ ಗೆಲುವಿಗೆ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ. ಪಟ್ಟಣದ ಬಸವೇಶ್ವರ ವೃತ್ತದಿಂದ ಡಾ ಬಿ.ಆರ್ ಅಂಬೇಡ್ಕರ್ ವೃತ್ತದವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಗೆಲುವಿಗೆ ಪೂಜೆ ಸಲ್ಲಿಸಿದರು. ಇಂದು ಮಧ್ಯಾಹ್ನ ಎಐಸಿಸಿ ಅಧ್ಯಕ್ಷ ಸ್ಥಾನದ ಫಲಿತಾಂಶ ಪ್ರಕಟಗೊಳ್ಳಲಿದೆ. ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಮಧ್ಯೆ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳಿಗೆ ಎಂಬುದನ್ನು ಕಾದು ನೋಡಬೇಕಿದೆ.
Last Updated : Feb 3, 2023, 8:29 PM IST