ಗುಹಾ ದೇವಾಲಯದ ಸುತ್ತಮುತ್ತ ಹೆಚ್ಚು ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಶ್ರೀನಗರ: ಹವಾಮಾನ ವೈಪರಿತ್ಯದಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಗುಹಾ ದೇಗುಲದ ಸುತ್ತಲಿನ ಪರ್ವತಗಳಲ್ಲಿ ಭಾರಿ ಮಳೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಮಟ್ಟವೂ ಏರಿಕೆಯಾಗಿದೆ. ಹೀಗಾಗಿ ಯಾತ್ರಾರ್ಥಿಗಳನ್ನು ಪಂಚತಾರ್ಣಿ ಶಿಬಿರದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. ಮಳೆಯಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated : Feb 3, 2023, 8:25 PM IST