ಚೆನ್ನೈನಲ್ಲಿ ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಕ್ಯಾಂಡಲ್ ಮೆರವಣಿಗೆ
ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಕ್ಯಾಂಡಲ್ ಮೆರವಣಿಗೆ- ವಿಡಿಯೋ - Tamil Nadu BJP President K Annamalai
ತಮಿಳುನಾಡು :ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಚೆನ್ನೈನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಸಿದರು. ಕೃಷ್ಣಗಿರಿಯಲ್ಲಿ ಡಿಎಂಕೆ ಪಾಲಿಕೆ ಸದಸ್ಯನಿಂದ ಹಲ್ಲೆಗೊಳಗಾಗಿದ್ದ ಸೇನಾ ಸಿಬ್ಬಂದಿಯೊಬ್ಬರು ಇತ್ತೀಚೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಮಾಜಿ ಸೈನಿಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.