ಆರ್.ಡಿ.ಪಾಟೀಲ್ ಒಬ್ಬ ಬುದ್ಧಿವಂತ ಕ್ರಿಮಿನಲ್, ಆತನ ವಿಚಾರಣೆ ನಡೆಯತ್ತಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ - Etv Bharat Kannada
ಶಿವಮೊಗ್ಗ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಓರ್ವ ಬುದ್ಧಿವಂತ ಕ್ರಿಮಿನಲ್, ಆತನ ವಿಚಾರಣೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆರ್.ಡಿ. ಪಾಟೀಲ್ ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಇರುವಂತಹ ವ್ಯಕ್ತಿಯಾಗಿದ್ದಾನೆ. ಈತನನ್ನು ನಮ್ಮ ಪೊಲೀಸರು ಹಿಡಿಯಲು ಕಷ್ಟಪಟ್ಟಿದ್ದಾರೆ ಎಂದರು.
ಬಂಧನದ ನಂತರವು ಮತ್ತೆ ಆತ ತಪ್ಪಿಸಿಕೊಂಡು ಓಡಿ ಹೋಗಿದ್ದನು. ಆರ್.ಡಿ. ಪಾಟೀಲ್ ನಮ್ಮ ಪಕ್ಷದವನಲ್ಲ ಎಂದು ಕಾಂಗ್ರೆಸ್ ಅವರು ಹೇಳುತ್ತಿದ್ದಾರೆ. ಆದರೆ, ಆತ ಜಿಲ್ಲಾ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದ ದಾಖಲೆ ಸಿಕ್ಕಿದೆ. ಅವನಿಗೆ ರಕ್ಷಣೆ ನೀಡಲು ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ಇದು ಯಾಕೆ ಎಂದು ಗೊತ್ತಾಗಬೇಕಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಡಿಕೆಶಿ ನನ್ನ ಜೀವನ ಹಾಳು ಮಾಡಿದ್ದಾನೆ: ಸಿಡಿ ಪ್ರಕರಣ ಸಿಬಿಐಗೆ ನೀಡುವಂತೆ ಮನವಿ ಮಾಡ್ತೇನಿ: ರಮೇಶ್ ಜಾರಕಿಹೊಳಿ