ರಾಮನಗರ: ಟೋಲ್ ಸಿಬ್ಬಂದಿ-ಶಾಸಕರ ನಡುವೆ ವಾಗ್ವಾದ - ಈಟಿವಿ ಭಾರತ ಕನ್ನಡ
ರಾಮನಗರ: ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರು ಮತ್ತು ಟೋಲ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವೇಳೆ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಅವರ ಜೊತೆ ಟೋಲ್ ಸಿಬ್ಬಂದಿ ವಾಗ್ವಾದ ನಡೆಸಿದ್ದಾರೆ. ಬೆಂಗಳೂರಿನಿಂದ ಮಳವಳ್ಳಿ ಕಡೆ ತೆರಳುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರ ಕಾರನ್ನು ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಬಳಿ ತಡೆದು ನಿಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಶಾಸಕ ನರೇಂದ್ರಸ್ವಾಮಿ ಅವರು ಪಾಸ್ ತೋರಿಸಿದ್ದಾರೆ. ಈ ವೇಳೆ ನಿಮ್ಮ ಕಾರಿನ ನಂಬರ್ ಎಂಟ್ರಿ ಆಗಿಲ್ಲ ಎಂದು ಟೋಲ್ ಸಿಬ್ಬಂದಿ ಪರಿಶೀಲಿಸಲು ಮುಂದಾಗಿದ್ದಾರೆ. ಆಗ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ವಾಗ್ವಾದ ನಡೆದಿದೆ. ಸದ್ಯ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವಿನ ಜಟಾಪಟಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ :ಸಚಿವ ವೆಂಕಟೇಶ್ ಹೇಳಿಕೆಗೆ ಖಂಡನೆ: ಗೋವುಗಳೊಂದಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ