ಕೊಪ್ಪಳದ ಗವಿಮಠಕ್ಕೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಭೇಟಿ
ಕೊಪ್ಪಳ: ಬಿಜೆಪಿ ಹಮ್ಮಿಕೊಂಡಿರುವ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ರಾಜ್ಯಕ್ಕೆ ಆಗಮಿಸಿರುವ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಇಂದು ಕೊಪ್ಪಳದ ಪ್ರಸಿದ್ಧ ಗವಿಮಠಕ್ಕೆ ಭೇಟಿ ನೀಡಿದರು. ಬಿಜೆಪಿ ಹಮ್ಮಿಕೊಂಡಿರುವ ವಿಜಯಸಂಕಲ್ಪ ಯಾತ್ರೆ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಜರುಗುತ್ತಿದ್ದು, ಬಿಜೆಪಿ ಕೇಂದ್ರ ಸಚಿವರು, ಹಲವು ರಾಜ್ಯದ ಬಿಜೆಪಿ ಮುಖ್ಯಮಂತ್ರಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಇಂದು ಬೆಳಗ್ಗೆ ಗಂಟೆಗೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಕೊಪ್ಪಳಕ್ಕೆ ಆಗಮಿಸಿದ್ದು, ಗವಿಮಠಕ್ಕೆ ಭೇಟಿ ನೀಡಿ ಗವಿಸಿದ್ದೇಶ್ವರ ಕತೃಗದ್ದುಗೆ ಮತ್ತು ಗವಿಸಿದ್ದೇಶ್ವರ ಮಹಾಸ್ವಾಮಿಗಳ ದರ್ಶನಾಶೀರ್ವಾದ ಪಡೆದರು. ಸಚಿವ ಆನಂದ್ ಸಿಂಗ್, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದರು.
ಕರ್ನಾಟಕದಲ್ಲಿ ಒಂದು ದಿನದ ಪ್ರವಾಸ ಹಮ್ಮಿಕೊಂಡಿರುವ ಅವರು, ಕೊಪ್ಪಳ ಜಿಲ್ಲೆ ಗಿಣಗೇರಿ, ಬೂದಗುಂಪಾ, ಗಂಗಾವತಿ, ಕಾರಟಗಿಯಲ್ಲಿ ನಡೆಯುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ ಗಂಗಾವತಿಯಲ್ಲಿ ಹಮ್ಮಿಕೊಂಡಿರುವ ಬಹಿರಂಗ ಸಭೆಯಲ್ಲಿ ಮಾತನಾಡಲಿರುವ ಹಿಮಂತ್ ಬಿಸ್ವ ಶರ್ಮಾ ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ.
ಇವರೊಟ್ಟಿಗೆ ಇಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬಳ್ಳಾರಿ ವಿಭಾಗದ ಪ್ರಭಾರಿಗಳು ಸಿದ್ದೇಶ್ ಯಾದವ್, ಸಹ-ಪ್ರಭಾರಿ ಚಂದ್ರಶೇಖರ್ ಪಾಟೀಲ್ ಹಲಗೇರಿ, ಕೂಪ್ಪಳ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್, ಕೂಪ್ಪಳ ಜಿಲ್ಲೆಯ ಸ್ಥಳೀಯ ನಾಯಕರು ಹಾಗೂ ಇತರರು ಉಪಸ್ಥಿತರಿರಲಿದ್ದಾರೆ.
ಇದನ್ನೂ ನೋಡಿ:ಒಂದು ಜೋಳಿಗೆಗೆ ನೋಟು ಇನ್ನೊಂದು ಜೋಳಿಗೆಗೆ ವೋಟು.. ಮತದಾರರ ಮುಂದೆ ಹೊರಟ ಬಿಜೆಪಿ ನಾಯಕ