ಕರ್ನಾಟಕ

karnataka

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್

ETV Bharat / videos

ಗಾಂಧಿ ಸಮಾಧಿಗೆ ಆಸ್ಟ್ರೇಲಿಯಾದ ಪ್ರಧಾನಿ ಗೌರವ ನಮನ- ವಿಡಿಯೋ - ವಿಮಾನವಾಹಕ ನೌಕೆ INS ವಿಕ್ರಾಂತ್‌

By

Published : Mar 10, 2023, 12:37 PM IST

ನವದೆಹಲಿ: ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಇಂದು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಅಲ್ಬನೀಸ್ ಅವರನ್ನು ಪ್ರಧಾನಿ ಮೋದಿ ಆದರದಿಂದ ಬರಮಾಡಿಕೊಂಡರು.

ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಔಪಚಾರಿಕ ಸ್ವಾಗತ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಿ, "ಭಾರತದಲ್ಲಿ ಅತ್ಯಂತ ಆತ್ಮೀಯ ಸ್ವಾಗತ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳುತ್ತೇನೆ. ಆಸ್ಟ್ರೇಲಿಯಾ ಮತ್ತು ಭಾರತ ಸ್ನೇಹಿತ ರಾಷ್ಟ್ರಗಳು. ಈಗಾಗಲೇ ಉಭಯ ದೇಶಗಳ ನಡುವೆ ಉತ್ತಮ ಬಾಂಧವ್ಯವಿದೆ. ಎರಡು ದೇಶಗಳ ನಡುವಿನ ಪಾಲುದಾರಿಕೆ ಪ್ರತಿದಿನ ಇನ್ನಷ್ಟು ಬಲಗೊಳಿಸಲಾಗುವುದು" ಎಂದು ಹೇಳಿದರು.

ಆಸ್ಟ್ರೇಲಿಯಾ ಭಾರತದಲ್ಲಿ ಮಹತ್ವದ ವ್ಯಾಪಾರ ನಾಯಕರ ನಿಯೋಗವನ್ನು ಮುನ್ನಡೆಸುತ್ತಿದೆ. ಸಂಸ್ಕೃತಿಕ, ಆರ್ಥಿಕ ಸಂಬಂಧಗಳು ಮತ್ತು ಭದ್ರತಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತದೊಂದಿಗೆ ಸಂಬಂಧ ಬೆಳೆಸಲು ನಾವು ಬಯಸುತ್ತೇವೆ. ಉಭಯ ದೇಶಗಳ ಕ್ರಿಕೆಟ್ ತಂಡಗಳು ವಿಶ್ವದಲ್ಲೇ ಅತ್ಯುತ್ತಮ ಪೈಪೋಟಿ ನಡೆಸುತ್ತಿದ್ದು ಉತ್ತಮ ಜಗತ್ತನ್ನು ರೂಪಿಸಲು ಎರಡೂ ದೇಶಗಳು ಸಹಕರಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಎಸ್.ಜೈಶಂಕರ್ ಭೇಟಿ: ಇಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿರುವ ಆಂಥೋನಿ ಅಲ್ಬನೀಸ್, ಕೆಲಕಾಲ ಮಾತುಕತೆ ನಡೆಸಿದರು. ಆ ಬಳಿಕ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದಾರೆ. ಉಭಯ ದೇಶದ ನಾಯಕರು ತಮ್ಮ ರಾಷ್ಟ್ರಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ. ಅಲ್ಲದೆ, ವ್ಯಾಪಾರ, ಹೂಡಿಕೆ, ರಕ್ಷಣೆ, ಶಿಕ್ಷಣ ಮತ್ತು ನವೀಕರಿಸಬಹುದಾದ ಇಂಧನದ ಕುರಿತು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಬಳಿಕ, ಪ್ರಧಾನಿ ಅಲ್ಬನೀಸ್ ಅವರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ:ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಭಾರತಕ್ಕೆ ಭೇಟಿ: ಹೋಳಿ ಸಂಭ್ರಮದಲ್ಲಿ ಭಾಗಿ

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಪ್ರಧಾನಿ ಆಂಟೊನಿ ಅಲ್ಬನೀಸ್‌ ಅವರು ಬುಧವಾರ ಸಂಜೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ನೇರವಾಗಿ ಆಶ್ರಮಕ್ಕೆ ಪ್ರಯಾಣ ಬೆಳೆಸಿದ್ದರು. ನಿನ್ನೆ ಮುಂಬೈನಲ್ಲಿ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್‌ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತದ ಅತಿದೊಡ್ಡ ವಿಮಾನವಾಹಕ ನೌಕೆಯ ವಿವರಗಳನ್ನು ಹಂಚಿಕೊಂಡರು. ಬಳಿಕ, ಅಹಮದಾಬಾದ್‌ನಲ್ಲಿ ನರೇಂದ್ರ ಮೋದಿ ಅವರೊಂದಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯವನ್ನು ವೀಕ್ಷಿಸಿದರು.

ABOUT THE AUTHOR

...view details