ಕುಟುಂಬ ಸಮೇತರಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ ವೈ ವಿಜಯೇಂದ್ರ.. - ಶಿವಕುಮಾರಶ್ರೀಗಳ ಗದ್ದುಗೆ ದರ್ಶನ
ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಶಿಕಾರಿಪುರದ ನೂತನ ಶಾಸಕ ಬಿ ವೈ ವಿಜಯೇಂದ್ರ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರಶ್ರೀಗಳ ಗದ್ದುಗೆ ದರ್ಶನ ಪಡೆದರು.
ಶಿಕಾರಿಪುರದಲ್ಲಿ ಶಾಸಕರಾಗಿ ಆಯ್ಕೆ ಆದ ಬಳಿಕ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ್ದಾರೆ. ವಿಜಯೇಂದ್ರ ಅವರು ಪತ್ನಿ, ಪುತ್ರಿಯರ ಜೊತೆಗೆ ಶ್ರೀಮಠಕ್ಕೆ ಆಗಮಿಸಿದ್ದರು. ವಿಜಯೇಂದ್ರ ಅವರಿಗೆ ನಗರ ಶಾಸಕ ಜ್ಯೋತಿ ಗಣೇಶ್ ಸಾಥ್ ಕೊಟ್ಟರು.
ತುಮಕೂರು ಸಿದ್ದಗಂಗಾ ಮಠಕ್ಕೆ ಡಿಕೆಶಿ ಭೇಟಿ: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ. ನಿನ್ನೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದಿದ್ದರು.
ಗದ್ದುಗೆಗೆ ನಮಸ್ಕರಿಸಿದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಡಿ ಕೆ ಶಿವಕುಮಾರ್ ಜೊತೆಗೆ ಜಿಲ್ಲಾ ಕಾಂಗ್ರೆಸ್‌ನ ಮುಖಂಡರು ಹಾಜರಿದ್ದರು. ಸಿಎಲ್ಪಿ ಸಭೆಗೂ ಮುನ್ನ ಡಿ ಕೆ ಶಿವಕುಮಾರ್ ಮಠಕ್ಕೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿತ್ತು.