ಕರ್ನಾಟಕ

karnataka

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಚಂಡಿಕಾಯಾಗ

ETV Bharat / videos

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬಿ.ವೈ.ವಿಜಯೇಂದ್ರ ಕುಟುಂಬದಿಂದ ಚಂಡಿಕಾ ಯಾಗ - ಬಿ ವೈ ವಿಜಯೇಂದ್ರ ಕುಟುಂಬ

By

Published : Apr 7, 2023, 6:51 PM IST

ಚಿಕ್ಕಮಗಳೂರು : ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದರು. ಶಕ್ತಿದೇವತೆಯ ಸನ್ನಿಧಿಯಲ್ಲಿ ಗಣಪತಿ ಹೋಮ, ಚಂಡಿಕಾ ಯಾಗ ನೆರವೇರಿಸಿದ್ದಾರೆ.

ಶಿಕಾರಿಪುರ ಕ್ಷೇತ್ರದಿಂದಲೇ ವಿಜಯೇಂದ್ರ ಸ್ಪರ್ಧೆ-ಬಿಎಸ್​ವೈ: ವಿಜಯೇಂದ್ರ ಅವರು ವರುಣಾ ಕ್ಷೇತ್ರದಿಂದ ಸ್ಫರ್ಧಿಸುವುದಿಲ್ಲ, ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು (ಏಪ್ರಿಲ್ 4-2023) ರಂದು ಸ್ಪಷ್ಟಪಡಿಸಿದ್ದರು. ಶಿಕಾರಿಪುರದ ಕುಮದ್ವತಿ ಕಾಲೇಜು ಮೈದಾನದಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಗ್ರಾಮಾಂತರ ಭಾಗದ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ಉದ್ಘಾಟಿಸಿ ಅವರು ಮಾತನಾಡಿದ್ದರು. ತಾಲೂಕಿನ ಜನತೆಯಲ್ಲಿ ಗೊಂದಲಬೇಡ, ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧಿಸುತ್ತಾರೆ. ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಇದೇ ವೇಳೆ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದರು. ಇನ್ನು ಚುನಾವಣೆಗೆ ಸ್ಪರ್ಧಿಸುವ ಪಟ್ಟಿಯನ್ನು ಬಿಜೆಪಿ ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಾಕಷ್ಟು ಅಭ್ಯರ್ಥಿಗಳ ಹೆಸರು ಪ್ರಕಟಿಸಿವೆ.

ಇದನ್ನೂ ಓದಿ:  ವಿನಯ್ ಕುಲಕರ್ಣಿಯವರು ಜಿಲ್ಲೆ ಪ್ರವೇಶಿಸುವ ಬಗ್ಗೆ ಕಾನೂನು ಹೋರಾಟ ನಡೆಯುತ್ತಿದೆ: ಪತ್ನಿ ಶಿವಲೀಲಾ

ABOUT THE AUTHOR

...view details