ಶಿವಾಜಿ ಮೂರ್ತಿ ತೆರವು ಖಂಡಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ-ವಿಡಿಯೋ
ಬಾಗಲಕೋಟೆ: ಬಾಗಲಕೋಟೆ ನಗರದ ಸೋನಾರ್ ಬಡಾವಣೆ ಸಮೀಪದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದನ್ನು ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಹಿಂದೂ ಜಾಗರಣ ವೇದಿಕೆ, ವಿವಿಧ ಹಿಂದೂಪರ ಸಂಘಟನೆಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೂರ್ತಿಯನ್ನು ನಗರದಲ್ಲಿ ಆಗಸ್ಟ್ 25ರೊಳಗೆ ಮರುಪ್ರತಿಷ್ಠಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಘಟನೆಗಳು ಗಡುವು ನೀಡಿವೆ. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಬಿಜೆಪಿ ಪ್ರಮುಖರು ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಶ್ರೀಕಾಂತ ಹೊಸಕೇರಿ ಮಾತನಾಡಿ, "ತೆರವುಗೊಳಿಸಿದ ಜಾಗದಲ್ಲೇ ಆಗಸ್ಟ್ 25 ರೊಳಗಾಗಿ ಮತ್ತೆ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಮರು ಪ್ರತಿಷ್ಠಾಪಿಸಬೇಕು. ಇಲ್ಲವಾದಲ್ಲಿ ಮುಂದಿನ ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.
ಇದನ್ನೂಓದಿ:ಲೋಕಸಭೆ ಚುನಾವಣೆ: ಮಕ್ಕಳು, ಪತ್ನಿ, ಸಹೋದರರ ಕಣಕ್ಕಿಳಿಸಲು 'ಕೈ' ಕಲಿಗಳ ಕಸರತ್ತು