ಪಾವಗಡ ಪಟ್ಟಣದಲ್ಲಿ ಕರಡಿ ಪ್ರತ್ಯಕ್ಷ- ವಿಡಿಯೋ - ಪಾವಗಡ ಪಟ್ಟಣದಲ್ಲಿ ಕಾಡು ಪ್ರಾಣಿಗಳು ಪ್ರತ್ಯಕ್ಷ
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕರಡಿ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು. ರೆಡ್ಡಿ ಕಾಲೋನಿಯ ಮನೆಗಳ ಮುಂದೆ ಹಾಗೂ ನಡುಬೀದಿಯಲ್ಲಿ ಕರಡಿ ಓಡಾಡಿದೆ. ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಪಟ್ಟಣದ ಕನುಮನ ಕೆರೆ ಭೋವಿ ಕಾಲೋನಿಯಲ್ಲಿಯೂ ಕರಡಿ ಕಾಣಿಸಿಕೊಂಡಿತ್ತು. ಕೂಡಲೇ ಅರಣ್ಯ ಇಲಾಖೆ ಕರಡಿ ಸೆರೆಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪಾವಗಡ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.