ಅಗ್ನಿಪಥ್ ವಿರೋಧಿಸಿ ಭಾರತ್ ಬಂದ್: ದೆಹಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್, ರೈಲುಗಳೂ ರದ್ದು - ದೆಹಲಿಯಲ್ಲಿ ಟ್ರೈನ್ ರದ್ದು
ಕಳೆದ ವಾರ ಕೇಂದ್ರ ಸರ್ಕಾರವು ಜಾರಿಗೆ ತಂದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕೆಲವು ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿವೆ. ಹೀಗಾಗಿ ನವದೆಹಲಿಯಲ್ಲಿ 80 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಸೋಮವಾರ ದೆಹಲಿ-ಎನ್‌ಸಿಆರ್‌ನಾದ್ಯಂತ ಭಾರಿ ಟ್ರಾಫಿಕ್ ಜಾಮ್ ಕಂಡುಬಂದಿದೆ. ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ಭಾರತ್ ಬಂದ್ ಹಿನ್ನೆಲೆ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರೆ, ಹಲವು ರಾಜ್ಯಗಳ ವಿವಿಧ ರೈಲು ನಿಲ್ದಾಣಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
Last Updated : Feb 3, 2023, 8:24 PM IST