ಕರ್ನಾಟಕ

karnataka

ETV Bharat / videos

ಬಿಜೆಪಿ ಭದ್ರನೆಲೆಯಲ್ಲಿ ಭಾರತ್ ಜೋಡೋ: ರಾಹುಲ್‌ಗೆ ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್‌ - Priyanka Gandhi Vadra

By

Published : Nov 24, 2022, 8:55 AM IST

Updated : Feb 3, 2023, 8:33 PM IST

ಮಧ್ಯಪ್ರದೇಶ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಬಿಜೆಪಿ ಭದ್ರನೆಲೆಯಾಗಿರುವ ಮಧ್ಯಪ್ರದೇಶ ರಾಜ್ಯದ ಬೋರ್ಗಾಂವ್‌ನಿಂದ ಇಂದು ಬೆಳಗ್ಗೆ ಪುನರಾರಂಭವಾಗಿದೆ. ಯಾತ್ರೆಯು 78ನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಹಾಗು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ, ಪತಿ ರಾಬರ್ಟ್‌ ವಾದ್ರಾ ಸೇರಿದಂತೆ ಅನೇಕ ಕಾರ್ಯಕರ್ತರು, ಪಕ್ಷದ ಮುಖಂಡರು, ರೈತರು, ಮಹಿಳೆಯರು ಹೆಜ್ಜೆ ಹಾಕುತ್ತಿದ್ದಾರೆ. ಮುಂದಿನ 10 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರತ್ ಜೋಡೋ ಸಂಚರಿಸಲಿದೆ. ಸೆ.7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ಯಾತ್ರೆ ಈವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಸಂಚರಿಸಿ ಇದೀಗ ಮಧ್ಯಪ್ರದೇಶದಲ್ಲಿ ಸಾಗುತ್ತಿದೆ.
Last Updated : Feb 3, 2023, 8:33 PM IST

ABOUT THE AUTHOR

...view details