ವಿಶ್ವಕಪ್: ಭಾರತದ ಗೆಲುವಿಗಾಗಿ ಉಜ್ಜಯಿನಿ ಮಹಾಕಾಲನಿಗೆ ಭಸ್ಮಾರತಿ-ವಿಡಿಯೋ - ಉಜ್ಜಯಿನಿ ಮಹಾಕಾಲನಿಗೆ ಭಸ್ಮ ಆರತಿ
Published : Nov 19, 2023, 1:30 PM IST
ಮಧ್ಯಪ್ರದೇಶ:ವಿಶ್ವಕಪ್ 2023ರ ಫೈನಲ್ ಪಂದ್ಯದ ಮಹಾಯುದ್ಧಕ್ಕೆ ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ರಂಗೇರಿದೆ. ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪಂದ್ಯವಾಡಲು ಸಿದ್ದವಾಗಿವೆ. ಭಾರತ ಕಪ್ ಗೆದ್ದು ಚಾಂಪಿಯನ್ ಆಗಲಿ ಎಂದು ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಲ ದೇವಾಲಯದಲ್ಲಿ ಭಸ್ಮ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಭಾರತದ ಗೆಲುವಿಗಾಗಿ ದೇಶದೆಲ್ಲೆಡೆ ದೇವರಿಗೆ ಪೂಜೆ ನೇರವೇರಿಸುವ ಮೂಲಕ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಭಾರತ ತಂಡದ ಪ್ರಮುಖ ಅಸ್ತ್ರ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಹಳ್ಳಿಯಲ್ಲಿ ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಕೋಟಿ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕ್ರಿಕೆಟ್ ಅಭಿಮಾನಿಗಳು ಧಾನ್ಯಗಳ ಮೂಲಕ ಭಾರತ ತಂಡದ ಆಟಗಾರರಿಗೆ ವಿಶೇಷವಾಗಿ ಶುಭ ಕೋರಿದ್ದಾರೆ.
ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಕೇರಳದ ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಅಯ್ಯಪ್ಪ ಭಕ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರು ನಗರದ ಪ್ರದೇಶವೊಂದರ ರಸ್ತೆಯಲ್ಲಿಯೇ ವಿಶ್ವಕಪ್ ಟ್ರೋಫಿ ಚಿತ್ರ ಬರೆದು, ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸಲಾಗಿದೆ. ಮಂಜುನಾಥ ನಗರದ ಶ್ರೀ ಭುವನೇಶ್ವರಿ ಯುವಕ ಸಂಘದ ಸದಸ್ಯರು ಟೀಂ ಇಂಡಿಯಾ ಗೆಲುವಿಗಾಗಿ ವಿಶೇಷ ಪೂಜೆ ಕೈಗೊಂಡಿದ್ದು, ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಮಾಡಿಸಿ ಪೂಜೆ ಮಾಡಿಸಿದ್ದಾರೆ.
ಇದನ್ನೂ ಓದಿ:ಫೈನಲ್ ಪಂದ್ಯದತ್ತ ದಿಟ್ಟ ಹೆಜ್ಜೆ ಹಾಕಿದ ಟೀಂ ಇಂಡಿಯಾ; ಸ್ಟೇಡಿಯಂ ಸುತ್ತ ಜನಸಾಗರ! -ವಿಡಿಯೋ