ಕರ್ನಾಟಕ

karnataka

ಸ್ಕೂಟಿ ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ: ಬೈಕ್​ ಸವಾರ ಸಾವು

ETV Bharat / videos

ಎದುರಿಗೆ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್​ ಸವಾರ ಸಾವು: ಮೊಬೈಲ್​ನಲ್ಲಿ ಭೀಕರ ದೃಶ್ಯ ಸೆರೆ - etv bharat kannada

By

Published : May 28, 2023, 10:53 PM IST

ಕೊಡಗು:ಸ್ಕೂಟಿ ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಸುದರ್ಶನ ವೃತ್ತದ ಬಳಿ ನಡೆದಿದೆ. ಎರಡನೇ ಮೊಣ್ಣಂಗೇರಿ ನಿವಾಸಿ ಧನಂಜಯ್ (57) ಮೃತ ದುರ್ದೈವಿ. ಮಡಿಕೇರಿ ಮತ್ತು ಸಿದ್ದಾಪುರ ರಸ್ತೆಯಲ್ಲಿ ಸ್ನೇಹಿತನ ಮನೆಗೆ ಊಟಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಸುಳ್ಯದಲ್ಲಿ ವಿದ್ಯಾರ್ಥಿಗಳಿದ್ದ ಬೈಕ್​ಗೆ ಕಾರು ಡಿಕ್ಕಿ; ಓರ್ವ ಬಲಿ, ಮತ್ತೋರ್ವ ಗಂಭೀರ

ಮೈಸೂರುನಿಂದ ಮಂಗಳೂರು ಕಡೆಗೆ ಹೊರಟಿದ್ದ ಗೂಡ್ಸ್ ವಾಹನದಲ್ಲಿ ಕುಳಿತ್ತಿದ್ದ ವ್ಯಕ್ತಿ ರಸ್ತೆ ತಿರುವಿನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿರುವಾಗ ಮಡಿಕೇರಿ ಕಡೆಯಿಂದ ಬಂದ ಬೈಕ್​ ಸಾವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ದೃಶ್ಯಗಳು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ‌ ನಡೆಸಿದ್ದಾರೆ. ಮೃತ ಧನಂಜಯ್ ಎರಡನೇ ಮೊಣ್ಣಂಗೇರಿ ಗ್ರಾಮದ ಪಂಚಾಯಿ ಸದಸ್ಯೆ ಪುಷ್ಪವತಿ ಎಂಬುವವರ ಪತಿಯಾಗಿದ್ದಾರೆ. 

ಇದನ್ನೂ ಓದಿ:ಟೈರ್​ ಸ್ಫೋಟಗೊಂಡು ಲಾರಿಗೆ ಗುದ್ದಿದ ಕಾರು: ಸ್ಥಳದಲ್ಲೇ ಆರು ಜನರ ದುರ್ಮರಣ

ABOUT THE AUTHOR

...view details