ಓವರ್‌ಟೇಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ: ಸಿಸಿಟಿವಿ ದೃಶ್ಯ - ಈಟಿವಿ ಭಾರತ್ ಕನ್ನಡ ನ್ಯೂಸ್
ಧಾರವಾಡ :ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ನಿನ್ನೆ (ಗುರುವಾರ) ರಾತ್ರಿ ಧಾರವಾಡದ ಬೈಪಾಸ್‌ನಲ್ಲಿ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆಯಿತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿವಾಸಿ ಸಂತೋಷ್ ಭೋಸಲೆ (30) ಮೃತ ಸವಾರ ಎಂದು ಗುರುತಿಸಲಾಗಿದೆ.
ಭೀಕರ ರಸ್ತೆ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಾರಿ ಎಡಭಾಗದ ರಸ್ತೆಯಲ್ಲಿ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಓವರ್ ಟೇಕ್ ಮಾಡಲು ಹೋದ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಸಂತೋಷ್ ಸ್ಥಳದಲ್ಲೇ ಅಸುನೀಗಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಅಪಘಾತ ಪ್ರಕರಣ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಆ.5 ರಂದು ಶನಿವಾರ ಸಂಭವಿಸಿತ್ತು.
ಇದನ್ನೂ ಓದಿ :ನೆಲಮಂಗಲ: ಗ್ರಾ.ಪಂ ಚುನಾವಣೆಗೆ ಬರುವಾಗ ರಸ್ತೆ ಅಪಘಾತ; ಇಬ್ಬರು ಸಾವು, ಮೂವರಿಗೆ ಗಾಯ