'ಈ ಬಾರಿಯೂ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ': ಬಿ ವೈ ವಿಜಯೇಂದ್ರ ವಿಶ್ವಾಸ
ಶಿವಮೊಗ್ಗ: ರಾಜ್ಯ ಗಮನ ಸೆಳೆದ ವಿಧಾನಸಭಾ ಕ್ಷೇತ್ರಗಳಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರವು ಒಂದು. ಮಾಜಿ ಸಿಎಂ ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ಈ ಬಾರಿ ಅವರ ಮಗ ಬಿ ವೈ ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ವಿಜಯೇಂದ್ರ ಅವರು ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಇಂದು ರಾಜ್ಯ ವಿಧಾನಸಭೆ ಚುನಾವಣೆಯು ನಡೆಯುತ್ತಿದ್ದು, ಬೆಳಗ್ಗೆಯೇ ವಿಜಯೇಂದ್ರ ಅವರು ಮತ ಚಲಾಯಿಸಿದ್ದಾರೆ. ಶಿಕಾರಿಪುರ ಆಡಳಿತ ಭವನದ ಬೂತ್ ನಂಬರ್ 134 ರಲ್ಲಿ ಕುಟುಂಬ ಸಮೇತ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ. ಬಳಿಕ 'ಈಟಿವಿ ಭಾರತ' ಜೊತೆ ಮಾತನಾಡಿದ ಅವರು, ಈ ಬಾರಿಯೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
"ನಮ್ಮ ತಂದೆ ಹಾಗೂ ಪಕ್ಷದ ಹಿರಿಯರ ಆಶೀರ್ವಾದದಿಂದ ನಾನು ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಿದ್ದೇನೆ. ನಮ್ಮ ತಂದೆ ಬಿಎಸ್ವೈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ನಡೆಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಸಹ ಹಗಲಿರುಳು ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದೆ. ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದೆ" ಎಂದರು.
"ಶಿಕಾರಿಪುರದಲ್ಲಿ ಬಂಜಾರ ಮತ ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಬಾರಿ ನಮಗೆ ಬರುತ್ತದೆ. ಬಿಜೆಪಿ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ಇದನ್ನೂ ಓದಿ:ಕೈಕೊಟ್ಟ ಇವಿಎಂ ಮಷಿನ್: ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತ..!