ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಗೆಲುವು - ಈಟಿವಿ ಭಾರತ ಕನ್ನಡ
ಶಿವಮೊಗ್ಗ:ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೇಶ್ ವಿರುದ್ಧ 27,328 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಗೆಲುವಿನ ನಂತರ ಈಟಿವಿ ಭಾರತದೊಂದಿಗೆ ಮಾತನಾಡಿದ ಚೆನ್ನಬಸಪ್ಪ ಅವರು, ಇದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಗೆಲುವು. ಕಾರ್ಯಕರ್ತರು ಮತ್ತು ಸಂಘಟನೆಯ ಪರಿಶ್ರಮವೇ ಈ ಜಯಕ್ಕೆ ಕಾರಣ. ಇದು ಸಂಘಟನೆಗೆ ಸಮರ್ಪಿತವಾದ ಗೆಲುವಾಗಿದೆ ಎಂದು ಸಂತಸ ಹಂಚಿಕೊಂಡರು.
ಮುಂದಿನ ಎಲ್ಲ ಕಾರ್ಯಗಳ ಬಗ್ಗೆ ಚರ್ಚೆ ಮಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಆಗಬೇಕಾದ ಎಲ್ಲ ಕಾರ್ಯಗಳನ್ನು ಮಾಡಲಾಗುವುದು ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ಕೊಡುವೆ. ಗೆಲುವು ಖುಷಿ ಕೊಟ್ಟಿದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಗೆಲುವು ದಾಖಲಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ರಾಜ್ಯಕ್ಕೆ ಪ್ರಧಾನಿ ಮೋದಿ ಸೇರಿದಂತೆ, ಕೇಂದ್ರದ ನಾಯಕರ ರೋಡ್ ಶೋ, ಪ್ರಚಾರದ ಹೊರತಾಗಿಯೂ ಕೇವಲ 65 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.
ಇದನ್ನೂ ಓದಿ:ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ: 11 ಕ್ಷೇತ್ರ ಕೈ ವಶ, 8 ಸ್ಥಾನ ಬಿಜೆಪಿ ಮಡಿಲಿಗೆ