ಕರ್ನಾಟಕ

karnataka

2024ರ ಲೋಕಸಭೆ ಚುನಾವಣೆ: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ: ನಳಿನ್ ಕೊಹ್ಲಿ

ETV Bharat / videos

2024ರ ಲೋಕಸಭೆ ಚುನಾವಣೆ: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ: ನಳಿನ್ ಕೊಹ್ಲಿ - Nalin Kohli

By

Published : Jul 6, 2023, 10:25 PM IST

ಗುವಾಹಟಿ (ಅಸ್ಸೋಂ):''2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ'' ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ನಳಿನ್ ಕೊಹ್ಲಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಪೂರ್ವ ಮತ್ತು ಈಶಾನ್ಯ ಭಾರತದ 12 ರಾಜ್ಯಗಳ ಬಿಜೆಪಿಯ ಹಿರಿಯ ನಾಯಕರ ಸಭೆ ಗುರುವಾರ ಗುವಾಹಟಿಯಲ್ಲಿ ನಡೆದ ಅವರು ಮಾತನಾಡಿದರು. ''ಸಭೆಯಲ್ಲಿ ಪಕ್ಷದ ಸಂಘಟನೆಯ ವಿಷಯಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ. ಇತರ ವಿಷಯಗಳ ಉಲ್ಲೇಖ ಮಾಡಿಲ್ಲ. ಪಕ್ಷದ ಕಾರ್ಯತಂತ್ರಗಳನ್ನು ವಿಶ್ಲೇಷಿಸಲು ಸಾಂಸ್ಥಿಕ ಮಟ್ಟದಲ್ಲಿ ಪ್ರಕ್ರಿಯೆಗೆ ಇದು ಸಮಯವಾಗಿದೆ'' ಎಂದರು. 

ಮುಂಬರುವ 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷದ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲು ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ರಾಜ್ಯಗಳು ಸೇರಿದಂತೆ 12 ಪೂರ್ವ ರಾಜ್ಯಗಳ ಬಿಜೆಪಿ ನಾಯಕತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್, ಅಸ್ಸೋಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ತ್ರಿಪುರ ಸಿಎಂ ಮಾಣಿಕ್ ಸಹಾ, ಪಕ್ಷದ ಸಂಸದರು ಮತ್ತು ಶಾಸಕರು ಮತ್ತು ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಇತರರು ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ:ರಾಜಸ್ಥಾನ ಚುನಾವಣಾ ಕಾರ್ಯತಂತ್ರದ ಬಗ್ಗೆ ಖರ್ಗೆ - ರಾಹುಲ್​ ಸಭೆ .. ಗೆಹ್ಲೋಟ್ - ಪೈಲಟ್ ಬಿಕ್ಕಟ್ಟು ಪರಿಹಾರ: ನಾಳೆಯಿಂದಲೇ ಪ್ರಚಾರ ಶುರು

ABOUT THE AUTHOR

...view details