ಕರ್ನಾಟಕ

karnataka

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ನಿರ್ಲಕ್ಷ್ಯ : ಈಶ್ವರ್ ಖಂಡ್ರೆ ಆರೋಪ

ETV Bharat / videos

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ: ಈಶ್ವರ್ ಖಂಡ್ರೆ - debate on budget in assembly

By

Published : Feb 23, 2023, 7:19 PM IST

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಈ ಭಾಗದಲ್ಲಿ ಶಿಕ್ಷಣ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ಒದಗಿಸದೇ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್​ ಶಾಸಕ ಈಶ್ವರ ಖಂಡ್ರೆ ವಿಧಾನಸಭೆಯಲ್ಲಿಂದು ಆರೋಪಿಸಿದರು. ಬಜೆಟ್ ಮೇಲಿನ ಮುಂದುವರೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನೇ ರಚನೆ ಮಾಡದೆ, ಕಳೆದ ಬಜೆಟ್​ನಲ್ಲಿ ಒದಗಿಸಿದ ಹಣವನ್ನು ಸಮರ್ಪಕವಾಗಿ ಖರ್ಚು ಮಾಡಿಲ್ಲ. ಈ ಭಾಗದ 41 ವಿಧಾನಸಭಾ ಕ್ಷೇತ್ರಗಳು ತೀರಾ ಹಿಂದುಳಿದಿವೆ. ಅವುಗಳ ಅಭಿವೃದ್ಧಿಗೆ ಇಚ್ಛಾಶಕ್ತಿ ತೋರಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರವಿದ್ದಾಗ ಸುಮಾರು 36 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನೆಪವೊಡ್ಡಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಈ ಭಾಗದಲ್ಲಿ ಸುಮಾರು 50 ಸಾವಿರ ವಿವಿಧ ಹುದ್ದೆಗಳು ಖಾಲಿ ಇವೆ. ಆದರೂ, ಸರ್ಕಾರ ಈ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ ಎಂದರು.

ಇದನ್ನೂ ಓದಿ:ಜೆಡಿಎಸ್​​ಗೆ ನೀಡುವ ಒಂದೊಂದು ಮತವೂ ಕಾಂಗ್ರೆಸ್​ಗೆ ಹೋಗುತ್ತದೆ: ಅಮಿತ್​ ಶಾ

ABOUT THE AUTHOR

...view details