ಕರ್ನಾಟಕ

karnataka

ಬಿಜೆಪಿ ಶಾಸಕ ಎಸ್ ವಿ ರಾಮಚಂದ್ರ

By

Published : Feb 8, 2023, 5:05 PM IST

Updated : Feb 14, 2023, 11:34 AM IST

ETV Bharat / videos

'224 ಕ್ಷೇತ್ರದ ಎಲ್ಲ ಬಿಜೆಪಿ ಅಭ್ಯರ್ಥಿಗಳೂ ಸಿಎಂ ಆಗುವ ಅರ್ಹತೆ ಹೊಂದಿದ್ದಾರೆ'

ದಾವಣಗೆರೆ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಹೇಳಿಕೆ ಖಂಡಿಸಿ ಬಿಜೆಪಿ ಪಾಳಯದ ನಾಯಕರು 'ದಳ'ಪತಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇಂದು ಜಗಳೂರು ಬಿಜೆಪಿ ಶಾಸಕ ಎಸ್.ವಿ.ರಾಮಚಂದ್ರ ಪ್ರತಿಕ್ರಿಯಿಸಿದರು.  

ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ ವಿಚಾರವಾಗಿ ಮಾತನಾಡುವಷ್ಟು ದೊಡ್ಡವನಲ್ಲ. ಬಿಜೆಪಿಯಲ್ಲಿ 224 ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಮುಖ್ಯಮಂತ್ರಿ ಆಗುವ ಅರ್ಹತೆ ಇರುವವರೇ. ಯಾರನ್ನೇ ಸಿಎಂ ಮಾಡಿದರೂ ನಮ್ಮ ವಿರೋಧವಿಲ್ಲ. ಹೈಕಮಾಂಡ್​ ತೀರ್ಮಾನಕ್ಕೆ ನಾವು ಬದ್ಧ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ" ಎಂದರು.  

5ನೇ ವರ್ಷದ ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದು ನನ್ನ ಪುಣ್ಯ ಎಂದು ಇದೇ ವೇಳೆ ಹೆಮ್ಮೆ ವ್ಯಕ್ತಪಡಿಸಿದರು. ಈಗಾಗಲೇ ಜಾತ್ರೆಗೆ ರಾಜ್ಯಾದ್ಯಂತ ಭಕ್ತರು ಆಗಮಿಸುತ್ತಿದ್ದು, ಎರಡು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಸಿಎಂ ಸೇರಿದಂತೆ ಸಂಪುಟದ ಹಲವು ಸಚಿವರು ಭಾಗಿಯಾಗಲಿದ್ದಾರೆ. ಇಂದಿನಿಂದ ಆರಂಭವಾಗಿರುವ ಜಾತ್ರೆಯಲ್ಲಿ ಕೃಷಿ‌, ಉದ್ಯೋಗ ಮೇಳ, ಮಹಿಳಾ ಗೋಷ್ಠಿ ಹೀಗೆ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. 

ಇದನ್ನೂ ಓದಿ: ಅನುದಾನದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ: ಮೋದಿ ಸರ್ಕಾರದ ವಿರುದ್ಧ  ಹೆಚ್​ಡಿಕೆ ಟೀಕೆ

Last Updated : Feb 14, 2023, 11:34 AM IST

ABOUT THE AUTHOR

...view details